i
ಬಾಲಕಿಯರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಉಡುಪಿ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಬನ್ನಂಜೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿ, ಊಟ, ವಸತಿ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.ಇದೇ ಸಂದರ್ಭದಲ್ಲಿ ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಪಾಕೃತಿಕ ವಿಕೋಪ ನಿರ್ವಹಣಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಸಭೆಗೂ ಮುನ್ನ ಮುಖ್ಯಮಂತ್ರಿಗಳು ಜನತಾದರ್ಶನ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಹಾಜರಿದ್ದರು.