i
ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ವಾಟರ್ ಟ್ಯಾಂಕಿಗೆ ವಿಷಪ್ರಾಶನ ಶಂಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಲುಷಿತ ನೀರು ಸೇವಿಸಿ ಮಹಿಳೆ ಸೇರಿ ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಮಂಗಳವಾರ ನಡೆದಿದೆ.
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಂಜುಳಾ(23) ಮತ್ತು ರಘು(24) ಚಿಕಿತ್ಸೆ ಫಲಿಸದೆ ಚಿತ್ರದುರ್ಗ ಜಿಲ್ಲಾಸ್ಪತ್ರೆ ಯಲ್ಲಿ ಸಾವನ್ನಪ್ಪಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತ ಮಂಜುಳಾ ಅವರಿಗೆ ಒಂದು ವರ್ಷದ ಮಗು, ಪತಿ ಇದ್ದು ಕುಟುಂಬದವರ ಆಕ್ರಂಧನ ಮುಗಿಲು ಮುಟ್ಟಿತ್ತು.
ಕವಾಡಿಗರಹಟ್ಟಿಯ 10 ಮಕ್ಕಳು ಸೇರಿದಂತೆ ಸುಮಾರು 40 ಮಂದಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದು ಅವರೆಲ್ಲ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆ ಪೈಕಿ 5 ಮಂದಿ ಆರೋಗ್ಯ ಗಂಭೀರವಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಗರಸಭೆ ಅಧಿಕಾರಿಗಳು, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾರಿ ಕೆ.ಪರಶುರಾಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಂಗನಾಥ್ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದೆ.