i
ಮೊರಾರ್ಜಿ ವಸತಿ ಶಾಲೆಗಳ 6ನೇ ತರಗತಿಗೆ 4ನೇ ಸುತ್ತಿನ ಸೀಟು ಹಂಚಿಕೆ ಕೌನ್ಸಿಲಿಂಗ್ ಆ.16ರಂದು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ 2023-2024ನೇ ಸಾಲಿನ 6ನೇ ತರಗತಿಯ 4ನೇ ಸುತ್ತಿನ ಸೀಟು ಹಂಚಿಕೆಗೆ ಅರ್ಹ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಎಲ್ಲಾ ವಸತಿ ಶಾಲೆಗಳಲ್ಲಿ ಪ್ರಕಟಿಸಲಾಗಿದೆ.
ಸೀಟು ಹಂಚಿಕೆ ಕೌನ್ಸಿಲಿಂಗ್ ಕಾರ್ಯಕ್ರಮವನ್ನು ಇದೇ ಆಗಸ್ಟ್ 16ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಪಕ್ಕದ ಕ್ರೀಡಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಯ್ಕೆ ಪಟ್ಟಿಯಲ್ಲಿನ ವಿದ್ಯಾರ್ಥಿಗಳು ಹಾಗೂ ಪೆÇೀಷಕರು ಆಧಾರ್ ಕಾರ್ಡ್, ಜಾತಿ-ಆದಾಯ ಪ್ರಮಾಣಪತ್ರ ಹಾಗೂ ಪರೀಕ್ಷಾ ಪ್ರವೇಶ ಪತ್ರಗಳ ಮೂಲ ಪ್ರತಿಗಳೊಂದಿಗೆ ಹಾಜರಾಗಲು ಸೂಚಿಸಿದೆ.
ಅಭ್ಯರ್ಥಿಗಳಿಗೆ ಮೀಸಲಾತಿ ಹಾಗೂ ಮೆರಿಟ್ ಅನುಸಾರ ಖಾಲಿ ಇರುವ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ಪ್ರವೇಶ ನೀಡಲಾಗವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.