i
ಎಸ್ಎಸ್ಎಲ್ಸಿ ಪಾಸಾದ ವಿದ್ಯಾರ್ಥಿಗಳಿಂದ ಜಿಟಿಟಿಸಿಯ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಜಿಟಿಟಿಸಿ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಡಿಪೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM) ಹಾಗೂ ಡಿಪೋಮಾ ಇನ್ ಮೆಕಾಟ್ರಾನಿಕ್ಸ್ (DMCH) ಕೋರ್ಸುಗಳಿಗೆ ಪ್ರವೇಶ ಪಡೆಯಲು ಎಸ್ಎಸ್ಎಲ್ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿಗಳನ್ನು ಕೆಇಎ ಪೋರ್ಟಲ್ ಮುಖಾಂತರ ಹಾಕಲಾಗಿರುತ್ತದೆ.
ಆದರೆ ಡಿಪೋಮಾ ಇನ್ ಮೆಕಾಟ್ರಾನಿಕ್ಸ್ (DMCH) ಕೋರ್ಸ್ನಲ್ಲಿ ಇನ್ನು ಕೆಲವೇ ಕೆಲವು ಸೀಟುಗಳು ಬಾಕಿ ಇದ್ದು, ಪ್ರವೇಶಾತಿಯೂ “ಮೊದಲು ಬಂದವರಿಗೆ ಮೊದಲ ಆದ್ಯತೆ” ಮೇರೆಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಸರ್ವೇ ನಂ. 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಹಾಳ್ ಚಿತ್ರದುರ್ಗ, ದೂರವಾಣಿ ಸಂಖ್ಯೆ 8073493120, 9481866855 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.