i
ಪತಿ, ಪತ್ನಿ, ಪುತ್ರ ಮೂರು ಮಂದಿ ಅಮೇರಿಕಾದಲ್ಲಿ ಸಾವು…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ಮೂಲದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವಂತಹ ಘಟನೆ ಅಮೇರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ನಲ್ಲಿ ನಡೆದಿದೆ.
ಮೃತರಾದ ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಇವರುಗಳು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ನಿವಾಸಿಗಳಾಗಿದ್ದಾರೆ. ಅಮೆರಿಕದಲ್ಲಿ ಕಳೆದ 9 ವರ್ಷಗಳಿಂದ ವಾಸವಾಗಿದ್ದ ಯೋಗೇಶ್, ಪ್ರತಿಭಾ ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಮೃತದೇಹ ತರಿಸಿಕೊಡುವಂತೆ ಮೃತ ಯೋಗೇಶ್ ತಾಯಿ ಶೋಭಾ ದಾವಣಗೆರೆ ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.