i
ಮುಖ್ಯಮಂತ್ರಿಗಳ ತೀವ್ರ ಸ್ಪಂದನೆ, 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಪಡೆದ ದೊಣಮ್ಮ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿದ್ದ ವಿಚಾರವನ್ನು ಸ್ಥಳೀಯರಾದ ಮಹೇಂದ್ರ ಅವರು ಮುಖ್ಯಮಂತ್ರಿಗಳ ಕಚೇರಿಯ ಗಮನಕ್ಕೆ ತಂದ ತಕ್ಷಣ ಸ್ಪಂದಿಸಿ, ಕೇವಲ 24 ಗಂಟೆಗಳ ಒಳಗೆ ಅವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡ ಕುಟುಂಬದ ಮಹಿಳೆ ಸಮಸ್ಯೆ ತೀವ್ರವಾಗಿ ಸ್ಪಂದಿಸಿದ್ದಾರೆ.
ಅಷ್ಟೇ ಅಲ್ಲ ಬದಲಾವಣೆ ಮೂಡಿಸಲು ನಾವು ಸಿದ್ಧರಿದ್ದೇವೆ. ನಮ್ಮ ಈ ಕಾರ್ಯಕ್ಕೆ ನಿಮ್ಮ ಸಹಕಾರವೂ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಸಾರ್ವಜನಿಕರಲ್ಲಿ ಕೋರಿದ್ದಾರೆ.