i
ಭೀಕರ ರಸ್ತೆ ಅಪಘಾತ ಅಕ್ಕ-ತಮ್ಮ ಸ್ಥಳದಲ್ಲೇ ಸಾವು…
ಚಂದ್ರವಳ್ಳಿ ನ್ಯೂಸ್, ಶಿರಾ:
ಭೀಕರ ರಸ್ತೆ ಅಪಘಾತದಲ್ಲಿ ಅಕ್ಕ-ತಮ್ಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ತರೂರು ಗ್ರಾಮದ ಬಳಿ ಜರುಗಿದೆ.
ಅಕ್ಕ ತಮ್ಮ ಸಂಚರಿಸುತ್ತಿದ್ದ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ ಮೀನಾಕ್ಷಿ (30) ಹಾಗೂ ತಮ್ಮ ಶಿವಕುಮಾರ್(23) ಮೃತ ಪಟ್ಟಿದ್ದಾರೆ.
ಅಕ್ಕ-ತಮ್ಮ ಇಬ್ಬರು ಆಂಧ್ರಪ್ರದೇಶದ ಅಗಳಿಗೆ ಬೈಕ್ ನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.