i
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸಹಕಾರ ಖಾತೆ ಸಚಿವ ಕೆ.ಎನ್. ರಾಜಣ್ಣ ಅವರು ಸೆ. 03 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಚಿವರು ಅಂದು ಬೆಳಿಗ್ಗೆ 11 ಗಂಟೆಗೆ ಹೊಸದುರ್ಗ ತಾಲ್ಲೂಕಿನ ಮಧುರೆ ಗ್ರಾಮಕ್ಕೆ ಆಗಮಿಸುವರು.
ನಂತರ ಇಲ್ಲಿನ ಬ್ರಹ್ಮವಿದ್ಯಾನಗರದ ಭಗೀರಥ ಪೀಠದಲ್ಲಿ ಆಯೋಜಿಸಲಾಗಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಸಂಜೆ 04 ಗಂಟೆಗೆ ತುಮಕೂರು ಜಿಲ್ಲೆ ಕ್ಯಾತಸಂದ್ರಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.