i
ಅಂತರಾಷ್ಟ್ರೀಯ ವಿವಿಗಳಲ್ಲಿ ವಿಶೇಷ ಕೋರ್ಸ್ಗಳ ಅಧ್ಯಯನಕ್ಕೆ ಅವಕಾಶ-ಕುಲಪತಿ ಪ್ರೊ.ಗಂಗಾಧರ್…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಬೋಧನೆ ಮತ್ತು ಕಲಿಕೆಯ ಪ್ರಗತಿಗಾಗಿ ಶೈಕ್ಷಣಿಕ ವಿನಿಮಯ ಮತ್ತು ಸಹಕಾರವನ್ನು ಉತ್ತೇಜಿಸಲು ಚಾಮರಾಜನಗರ ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ.ಎಂ.ಆರ್.ಗಂಗಾಧರ್ ಮತ್ತು ತರ್ನ್ಟಿಪ್ ಕಾಂಗ್ಟೆವೆತ್, ನಿರ್ದೇಶಕರು, ಯುರೋಪಿಯನ್ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ, ಪ್ಯಾರಿಸ್ ಫ್ರಾನ್ಸ್ ಇವರ ನಡುವೆ ದಿನಾಂಕ:08-09-2023ರಂದು ಐದು ವರ್ಷಗಳ ಅವಧಿಗೆ ಒಡಂಬಡಿಕೆಗೆ ಸಹಿ ಹಾಕಿದರು. ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳ ನಡುವಿನ ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳ ವಿನಿಮಯ ಮಾಡಿಕೊಳ್ಳುವುದರ ಮೂಲಕ ಶೈಕ್ಷಣಿಕ ಸಹಕಾರವನ್ನು ಉತ್ತೇಜಿಸುವುದು ಮತ್ತು ಕಲಿಕೆಗಾಗಿ ಬೋಧನೆಗೆ ಅಧ್ಯಾಪಕರ ಪರಿಣತಿಯನ್ನು ಪರಸ್ಪರ ವಿನಿಮಯದ ಮೂಲಕ ಬೋಧನೆ ಮತ್ತು ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವುದು ಈ ಒಡಂಬಡಿಕೆಯ ಮುಖ್ಯ ಉದ್ದೇಶವಾಗಿದೆ.
ಇದರಿಂದ ನಮ್ಮ ವಿಶ್ವವಿದ್ಯಾಲಯದ ಅಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ ಸೀಗುವುದಲ್ಲದೆ ನಮ್ಮ ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ವಿದೇಶದಲ್ಲಿ ಕೇಲವು ವಿಶೇಷ ಕೋರ್ಸ್ಗಳನ್ನು ಯುರೋಪಿಯನ್ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ ಅಡಿಯಲ್ಲಿ ಮಾಡಲು ಅವಕಾಶವಿದೆ ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಂ.ಆರ್.ಗಂಗಾಧರ್ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.