![](https://www.chandravallinews.com/wp-content/uploads/2023/09/nikhil-kumaraswamy1580720934.jpg)
i
ರಾಜಕೀಯದಿಂದ ದೂರ ಉಳಿಯುವೆ-ನಟ ನಿಖಿಲ್ ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಬೀದರ್:
ಕಳೆದ ಲೋಕಸಭೆ, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಜೆಡಿಎಸ್ ಪಕ್ಷದ ಯುವ ಮುಖಂಡ, ನಟ ನಿಖಿಲ್ ಕುಮಾರಸ್ವಾಮಿ ಅವರು ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಅವರು ಬೀದರ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜಕೀಯದಿಂದ ದೂರ ಉಳಿಯುತ್ತೇನೆ. ಆದರೆ, ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವುದಾಗಿ ಇದೇ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ ಎಂದು ಅವರು ತಿಳಿಸಿದರು.
ಸದ್ಯ ನಿಖಿಲ್ ಅವರ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ಹಿಂದೆ ಕೂಡ ಕುಮಾರಸ್ವಾಮಿಯವರು ಅವರು ತಮ್ಮ ಸಿನಿಮಾದ ಬಗ್ಗೆ ಮಾತನಾಡಿದ್ದು, ಇದಾದ ಕೆಲವೇ ದಿನದಲ್ಲಿ ನಿಖಿಲ್ ಅವರು ಹೇಳಿರುವ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.