i
ರೈತರ ಪಂಪ್ ಸೆಟ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರ ಬಂಧನ…
ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ರೈತರ ಜಮೀನುಗಳ ಕೊಳವೆ ಬಾವಿಗಳಿಗೆ ಅಳವಡಿಸಲಾಗಿದ್ದು ಮೋಟಾರ್ ಪಂಪ್ ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹರಿಹರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಮೋಟರ್ ಪಂಪ್ ಕಳ್ಳತನ ಮಾಡುತ್ತಿದ್ದ ಆರೋಪಿಗಳಾದ ಹರಿಹರ ನಗರದ ಸೈಯದ್ ಖಲಂದರ್(24), ಸೈಯದ್ ಅಲಿ ಅಲಿಯಾಸ್ ಸಜ್ಜು(22) ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ವಿವಿಧ ಗ್ರಾಮಗಳಲ್ಲಿ ಹಲವು ದಿನಗಳಂದ ರೈತರ ಮೋಟಾರ್ ಪಂಪ್ ಗಳು ಕಳ್ಳತನವಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ, ದಾವಣಗೆರೆ ಗ್ರಾಮಾಂತರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಬಸವರಾಜ ಬಿ.ಎಸ್ ಅವರ ಮಾರ್ಗದರ್ಶನದಲ್ಲಿ ಹರಿಹರ ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ಸಗರಿ ನೇತೃತ್ವದಲ್ಲಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಐಗಳಾದ ಅರವಿಂದ ಬಿ.ಎಸ್, ಅಬ್ದುಲ್ ಖಾದರ ಜಿಲಾನಿ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡವು ಆರೋಪಿಗಳನ್ನು ಸೆರೆ ಹಿಡಿದು 14 ವಿವಿಧ ಕಂಪನಿಗಳಗೆ ಸೇರಿದ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಮೋಟಾರುಗಳನ್ನು ವಶಕ್ಕೆ ಪಡೆದು, ತನಿಖೆ ಮುಂದುವರಿಸಲಾಗಿದೆ. ಮೋಟಾರ್ ಪಂಪ್ ಗಳ ಕಳ್ಳರ ಪತ್ತೆ ಕಾರ್ಯ ಮಾಡಿದ ಪೊಲೀಸರ ತಂಡವನ್ನು ಎಸ್ಪಿ ಉಮಾ ಪ್ರಶಾಂತ್ ಅಭಿನಂದಿಸಿದ್ದಾರೆ.