i
ಬಿಜೆಪಿ-ಜೆಡಿಎಸ್ ಮೈತ್ರಿ, ಬಿಜೆಪಿ ಕೇಂದ್ರ ನಾಯಕರ ಜೊತೆ ಜೆಡಿಎಸ್ ಚರ್ಚೆ…
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕರ್ನಾಟಕದ ಹಿತಕ್ಕಾಗಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಷಯದ ಬಗ್ಗೆ ಕೇಂದ್ರದ ಗೃಹ ಸಚಿವಅಮಿತ್ ಶಾ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರೊಂದಿಗೆ ನವದೆಹಲಿಯ ಗೃಹ ಸಚಿವರ ನಿವಾಸದಲ್ಲಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು.
ಬಿಜೆಪಿ ವರಿಷ್ಠರ ಜತೆಗಿನ ಮಾತುಕತೆ ಅತ್ಯಂತ ಸೌಹಾರ್ದ, ವಿಶ್ವಾಸಪೂರ್ವಕವಾಗಿ ನಡೆಯಿತು. ಈ ಮೈತ್ರಿಯಿಂದ ರಾಜ್ಯ ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎನ್ನುವುದು ನನ್ನ ಅಚಲ ನಂಬಿಕೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.ಗೋವಾ ರಾಜ್ಯದ ಮುಖ್ಯಮಂತ್ರಿಗಳಾದ ಪ್ರಮೋದ್ ಸಾವಂತ್, ಜೆಡಿಎಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಸಂಸದರಾದ ಕುಪೇಂದ್ರ ರೆಡ್ಡಿ, ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.