i
ರಾಜ್ಯಾದ್ಯಂತ ಡಿ.9 ರಂದು “ರಾಷ್ಟ್ರೀಯ ಲೋಕ್-ಅದಾಲತ್”…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ವತಿಯಿಂದ ಇದೇ ಡಿಸೆಂಬರ್ 09 ರಂದು ರಾಜ್ಯಾದ್ಯಂತ “ರಾಷ್ಟ್ರೀಯ ಲೋಕ್-ಅದಾಲತ್”ಹಮ್ಮಿಕೊಳ್ಳಲಾಗಿದೆ. ಈ ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬAಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವೆ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, “ನ್ಯಾಯ ದೇಗುಲ, ಮೊದಲನೆ ಮಹಡಿ, ಹೆಚ್ಚ ಸಿದ್ಧಯ್ಯ ರಸ್ತೆ, ಬೆಂಗಳೂರು, ಅಥವಾ ಟೋಲ್ ಫ್ರಿ ಸಂಖ್ಯೆ: 1800-425-90900, ದೂರವಾಣಿ ಸಂಖ್ಯೆ: 080-22111875, 080-22111730 ಅಥವಾ ವೆಬ್ ಸೈಟ್ www.kslsa.kar.nic.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಸದಸ್ಯ ಕಾರ್ಯದರ್ಶಿಗಳಾದ ಜೈ ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.