i
ನೀರಿಗಾಗಿ ಹೋರಾಟ ಮಾಡುತ್ತಿದ್ದ ರೈತರು, ಹೋರಾಟಗಾರರ ಬಂಧನ ಖಂಡನೀಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕರ್ನಾಟಕ ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಸರ್ಕಾರದ ವಿರುದ್ಧ ಅವರು ಕಿಡಿ ಕಾರಿದ್ದಾರೆ.