i
ಸೆ.30ರಂದು ನಿರಾಶ್ರಿತರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ ಹಾಗೂ ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ನಿರಾಶ್ರಿತರಿಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ಸೆಪ್ಟೆಂಬರ್ 30ರಂದು ಬೆಳಿಗ್ಗೆ 11.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಉದ್ಘಾಟನೆ ನೆರವೇರಿಸುವರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಕ ಜಗದೀಶ್ ಹೆಬ್ಬಳ್ಳಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಕೀಲಕರ ಸಂಘದ ಉಪಾಧ್ಯಕ್ಷ ಬಿ.ಎಂ.ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಆರ್.ಮಂಜುನಾಥ್, ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರದ ವ್ಯವಸ್ಥಾಪಕ ಎಂ.ಮಹಾದೇವಯ್ಯ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.