i
ಶೈಕ್ಷಣಿಕ ಶುಲ್ಕ ಮರು ಪಾವತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳು ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನ.
ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅರ್ಜಿಯನ್ನು ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.