i
ಸಿಎಂ ಸಿದ್ದರಾಮಯ್ಯ ಮಾಜಿ ಪ್ರಧಾನಿ ದೇವೇಗೌಡರ ಅನಿರೀಕ್ಷಿತ ಭೇಟಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು. CWC ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ , ಮಂಗಳೂರಿಗೆ ತೆರಳಲು ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಇವರ ಧರ್ಮಪತ್ನಿ ಚನ್ನಮ್ಮ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾದರು. ಈ ವೇಳೆ ಮುಖ್ಯಮಂತ್ರಿಗಳು ದೇವೇಗೌಡರು ಮತ್ತು ಚನ್ನಮ್ಮ ಅವರ ಆರೋಗ್ಯ ವಿಚಾರಿಸಿದರು.ಬಳಿಕ ದೇವೇಗೌಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದರು.
ಕೆಲ ಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.