i
ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆಗೆ ದಿನ ಫಿಕ್ಸ್, ಪತ್ರಿಕೆ ಸುದ್ದಿ ನಿಜವಾಯ್ತು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಶಾಸಕಿ ಪೂರ್ಣಿಮಾ ಅವರು ಇಂದು ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು.
ಇದೇ ತಿಂಗಳು ಅ.20ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಈ ಕುರಿತು ಚಂದ್ರವಳ್ಳಿ ದಿನ ಪತ್ರಿಕೆ ಅಕ್ಟೋಬರ್-2 ರಂದು ಸುಧಾಕರ್ ಪಾತ್ರ ಏನು, ಮಾಜಿ ಶಾಸಕಿ ಪೂರ್ಣಿಮಾ ಮತ್ತು ಅವರ ಪತಿ ಶ್ರೀನಿವಾಸ್ ಶೀಘ್ರ ಕಾಂಗ್ರೆಸ್ ಸೇರ್ಪಡೆ ಎಂದು ಸುದ್ದಿ ಪ್ರಕಟಿಸಿತ್ತು. ಈಗ ಆ ಸುದ್ದಿ ನಿಜವಾಗಿದೆ. ಅಕ್ಟೋಬರ್-20 ರಂದು ಸುಮಾರು ಐದಾರು ಸಾವಿರ ಅವರ ಆಪ್ತರು, ಹಿಂಬಾಲಕರು, ಕಾರ್ಯಕರ್ತರನ್ನೂ ಕೂಡಾ ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.