i
ಪ್ಯಾಲೆಸ್ಟೈನ್ ನಲ್ಲಿರುವ ಉಗ್ರರಿಗೆ ಕಾಂಗ್ರೆಸ್ ಬೆಂಬಲ-ಬೊಮ್ಮಾಯಿ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಇಸ್ರೇಲ್ ಪ್ಯಾಲೆಸ್ಟಿನ್ ಯುದ್ಧ ಹಿನ್ನೆಲೆ ಕಾಂಗ್ರೆಸ್ ಪ್ಯಾಲೆಸ್ಟಿನ್ ಗೆ ಬೆಂಬಲ ನೀಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಉತ್ತರಿಸಿ, ಇದೊಂದು ಅಂತರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ಟೈನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ಟೈನ್ ಹಮಾಸರು ಉಗ್ರವಾದಿಗಳು, ಅವರು ಪ್ಯಾಲೆಸ್ಟೈನ್ ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ ಎಂದು ಆರೋಪ ಮಾಡಿದರು.
ಪ್ಯಾಲೆಸ್ಟೈನ್ ನಲ್ಲಿರುವಂತಹ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ. ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತೆ ತುಷ್ಟಿಕರಣದ ರಾಜಕಾರಣಕ್ಕೆ ಇಳಿಯುತ್ತಿದೆ ಇದು ದೊಡ್ಡ ದುರಂತ ಎಂದರು.