i
ಪತ್ತೆಯಾದ 42 ಕೋಟಿ ಮತ್ತು 45 ಕೋಟಿ ಹಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಐಟಿ ರೇಡ್ ಮಾಡಿದ್ದು ಒಬ್ಬರ ಮನೆಯಲ್ಲಿ 42 ಕೋಟಿ ಇನ್ನೊಬ್ಬರ ಮನೆಯಲ್ಲಿ 45 ಕೋಟಿ ಅಕ್ರಮ ಹಣ ಸಿಕ್ಕಿದ್ದು ಈ ಅಕ್ರಮ ಹಣ ಸಂಗ್ರಹದ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿ ಮಾತನಾಡಿದ ಪ್ರಹ್ಲಾದ್ ಜೋಶಿ, ಬಿಲ್ಡರ್ ಸಂತೋಷ್ ಮನೆಯಲ್ಲಿ ಸಿಕ್ಕಿರುವ ಹಣವನ್ನು ಅವರು ಸ್ಪಷ್ಟವಾಗಿ ಹೇಳಿದ್ದು ಇದು ಕಾಂಗ್ರೆಸ್ ಮುಖಂಡರ ದುಡ್ಡು ಎಂದು, ಹಾಗಾದರೆ ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಎಂಬುದು ಮತ್ತೆ ಸಾಬೀತಾಗಿದೆ ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಐಟಿ ದಾಳಿಯಲ್ಲಿ ಸಿಕ್ಕ ಹಣ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಭ್ರಷ್ಟಾಚಾರದ ಹಣ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರೇ ಕಾಂಗ್ರೆಸ್ ಎಂದು ಕಿಡಿ ಕಾರಿದ್ದಾರೆ.ಮತ್ತೊಂದು ಮೂಲಗಳ ಪ್ರಕಾರ ಲಭ್ಯವಾಗಿರುವ ಹಣ ಕಮಿಷನ್ ಪಡೆದ ಹಣ ಎಂಬ ಆರೋಪವಿದೆ. ಆಡಳಿತ ನಡೆಸುತ್ತಿರುವ ಇವರು ಸತ್ಯ ಹರಿಶ್ಚಂದ್ರ ಎಂಬ ರೀತಿಯಲ್ಲಿ ಪೋಸ್ ಕೊಟ್ಟಿದ್ದರು. ಈಗ ಪತ್ತೆಯಾದ ಹಣದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂಬುದು ಸ್ಪಷ್ಟವಾಗಿದೆ. ಪತ್ತೆಯಾದ ಕೋಟಿ ಕೋಟಿ ಹಣದ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಜೋಶಿ ಅವರು ಆಗ್ರಹಿಸಿದರು. ಪಂಚರಾಜ್ಯ ಚುನಾವಣೆಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 1000ಕೋಟಿ ಸಂಗ್ರಹಿಸಲು ಮುಂದಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.