i
ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸ್ ಠಾಣೆ, ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ 5 ಲಕ್ಷ ಬಡ್ಡಿ ರಹಿತ ಸಾಲ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸಲು ಕಾಂಗ್ರೆಸ್ ಸರ್ಕಾರವು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಎಕ್ಸ್ ನಲ್ಲಿ ಟ್ವೀಟ್ ಮಾಡಿ, ಮಹಿಳೆಯರ ಸುರಕ್ಷತೆಗಾಗಿ 6 ನೂತನ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಮತ್ತು ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಕಲ್ಪಿಸುವುದಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿ, ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.