
20 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ-ಸಚಿವ ಮಧು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ರಾಜ್ಯದಲ್ಲಿ ಖಾಲಿ ಇರುವ 40,000 ಶಿಕ್ಷಕರ ಹುದ್ದೆಗಳ ಪೈಕಿ 20 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ಪೂಜೆ ಸಲ್ಲಿಸಿದ ನಂತರ ಸಚಿವರು ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಮುಂದಿನ ವರ್ಷದೊಳಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.
ವರ್ಷದೊಳಗೆ 20,000 ಶಿಕ್ಷಕರ ನೇಮಕ ಮಾಡಿಕೊಳ್ಳುವ ಚಿಂತನೆ ಇದೆ. ಶಿಕ್ಷಕರಿಗೆ ಇನ್ಫೋಸಿಸ್, ವಿಪ್ರೋ, ದೇಶಪಾಂಡೆ ಫೌಂಡೇಶನ್ ಸೇರಿದಂತೆ ಖಾಸಗಿ ಸಂಸ್ಥೆಗಳ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಶಾಲೆಗಳ ಅಭಿವೃದ್ಧಿ, ಕೆಪಿಎಸ್ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಗದರ್ಶನದಲ್ಲಿ ಶಿಕ್ಷಣ ಇಲಾಖೆಯಲ್ಲಿ ಹಲವು ಸುಧಾರಣೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.