i
ಬಿಜೆಪಿಗೆ ಮಾನ, ಮರ್ಯಾದೆ ಇದೆಯೇ- ಮುಖ್ಯಮಂತ್ರಿ ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಬಿಜೆಪಿಗೆ ಮಾನ, ಮರ್ಯಾದೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು. ಅವರು ಮೈಸೂರಿನಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿದರು.ಬಿಜೆಪಿ ಎಟಿಎಂ ಸರ್ಕಾರ ಎಂದು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಸುಳ್ಳು ಆರೋಪ. ಆಪರೇಷನ್ ಕಮಲ ಕೈಗೊಂಡು 25 ಕೋಟಿ ಹಣ ನೀಡಿ, 25 ಕೋಟಿ ಚುನಾವಣೆ ಗೆ ಖರ್ಚು ಮಾಡಲು ಹಣ ಎಲ್ಲಿಂದ ಬಂತು. ಇವರಿಗೆ ಏನಾದರೂ ಮಾನ, ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದರು.
ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದಕ್ಕೆ ಯಾರು ಜವಾಬ್ದಾರರು. 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ಬರದ ಸಂದರ್ಭದಲ್ಲಿ ವಿದ್ಯುತ್ ತೊಂದರೆಯಾಗಿರುವುದಕ್ಕೆ ಬಿಜೆಪಿ ಕಾರಣ. 16000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು. ಬಿಜೆಪಿ ಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ. ಏನೂ ಮಾಡಿದ್ದಾರೆ 3 ವರ್ಷ 10 ತಿಂಗಳಲ್ಲಿ ಎಂದು ಪ್ರಶ್ನಿಸಿದರು.30 ಸಾವಿರ ಕೋಟಿ ರೂ. ಬಾಕಿ ಬಿಲ್ಲುಗಳು- ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ. ರಾಜ್ಯ ಹಾಳು ಮಾಡಿದ್ದಕ್ಕೆ ಜನ ತಿರಸ್ಕಾರ ಮಾಡಿದ್ದಾರೆ. ಈಗ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಾರೆ ಹೊರತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.