i
ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಮರೀಗೌಡ- ಸಿಎಂ ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಮೈಸೂರು:
ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿಯ ರೂವಾರಿಯಾಗಿದ್ದರು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.ಮೈಸೂರಿನ ಕೇಂದ್ರಸ್ಥಳದಲ್ಲಿರುವ ಕರ್ಜನ್ ಪಾರ್ಕ್ ನಲ್ಲಿ ಡಾ.ಎಂ.ಹೆಚ್.ಮರೀಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗಿದೆ. ಡಾ.ಎಂ.ಹೆಚ್.ಮರೀಗೌಡರ ಸಾಧನೆಗಳು ಎಲ್ಲರಿಗೂ ಸ್ಪೂರ್ತಿ ತರಲಿದೆ ಎಂದು ತಿಳಿಸಿದರು.ಮಾಹಿತಿ ಪಡೆದು ಪರಿಶೀಲನೆ: ಹುಲಿ ಉಗುರು ಧರಿಸಿದ ಬಗ್ಗೆ ನಟರಾದ ದರ್ಶನ್ ಹಾಗೂ ಜಗ್ಗೇಶ್ ಅವರ ಪ್ರಕರಣ ದಾಖಲಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಬಿಜೆಪಿಗೆ ಮಾನ, ಮರ್ಯಾದೆ ಇದೆಯೇ- ಬಿಜೆಪಿ ಎಟಿಎಂ ಸರ್ಕಾರ ಎಂದು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಸುಳ್ಳು ಆರೋಪ. ಆಪರೇಷನ್ ಕಮಲ ಕೈಗೊಂಡು 25 ಕೋಟಿ ಹಣ ನೀಡಿ, 25.ಕೋಟಿ ಚುನಾವಣೆ ಗೆ ಖರ್ಚು ಮಾಡಲು ಹಣ ಎಲ್ಲಿಂದ ಬಂತು. ಇವರಿಗೆ ಏನಾದರೂ ಮಾನ , ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದರು. ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದಕ್ಕೆ ಯಾರು ಜವಾಬ್ದಾರರು. 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. . ಬರದ ಸಂದರ್ಭದಲ್ಲಿ ವಿದ್ಯುತ್ ತೊಂದರೆಯಾಗಿರುವುದಕ್ಕೆ ಬಿಜೆಪಿ ಕಾರಣ. 16000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು. ಬಿಜೆಪಿ ಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ. ಏನೂ ಮಾಡಿದ್ದಾರೆ 3 ವರ್ಷ 10 ತಿಂಗಳಲ್ಲಿ ಎಂದು ಪ್ರಶ್ನಿಸಿದರು.30 ಸಾವಿರ ಕೋಟಿ ರೂ. ಬಾಕಿ ಬಿಲ್ಲುಗಳು- ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ. ರಾಜ್ಯ ಹಾಳು ಮಾಡಿದ್ದಕ್ಕೆ ಜನ ತಿರಸ್ಕಾರ ಮಾಡಿದ್ದಾರೆ. ಈಗ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಾರೆ ಹೊರತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.