i
ಅ.30ರಂದು ಪ್ರದರ್ಶನ ಮತ್ತು ಮಾರಾಟದೊಂದಿಗೆ ಸಂಜೀವಿನಿ ಮಾಸಿಕ ಸಂತೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: Sanjeevini monthly festival with exhibition and sale on 30th…
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಮೆದೇಹಳ್ಳಿ ಒನಕೆ ಓಬವ್ವ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಇವರ ಸಹಯೋಗದೊಂದಿಗೆ ಇದೇ ಅಕ್ಟೋಬರ್ 30ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ “ಸಂಜೀವಿನಿ ಮಾಸಿಕ ಸಂತೆ”-ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ.
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರು ಮಾಸಿಕ ಸಂತೆ ಉದ್ಘಾಟಿಸುವರು.
ಎನ್ಆಾರ್ಎ.ಲ್ಎಂಗ (ಸಂಜೀವಿನಿ) ರೂಪುಗೊಂಡಂತಹ “ಮಾಸಿಕ ಸಂತೆ” ಕಾರ್ಯಕ್ರಮವು ಗ್ರಾಮ ಪಂಚಾಯಿತಿಮಟ್ಟದ ಮಹಿಳಾ ಒಕ್ಕೂಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವ-ಸಹಾಯ ಗುಂಪಿನ ಮಹಿಳೆಯರು ಸ್ಥಳೀಯವಾಗಿ ಉತ್ಪಾದಿಸುವ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸಲು ಸೂಕ್ತ ಮಾರುಕಟ್ಟೆ, ಪ್ರದರ್ಶನ ಮಾಡಲು ಉತ್ತಮ ಅವಕಾಶ ಕಲ್ಪಿಸಿಕೊಟ್ಟಿರುತ್ತದೆ.
ಚಿತ್ರದುರ್ಗ ತಾಲ್ಲೂಕಿನ ಸ್ವ-ಸಹಾಯ ಗುಂಪಿನವರು ಸ್ಥಳೀಯವಾಗಿ ಉತ್ಪಾದಿಸುವ ಉತ್ಪನ್ನಗಳಿಗೆ ಪ್ರದರ್ಶನ ಹಾಗೂ ಮಾರಾಟಕ್ಕಾಗಿ “ಮಾಸಿಕ ಸಂತೆ”ಯನ್ನು ನಡೆಸಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.