i
ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾ ವಚನ ಬೋಧನೆ ಮಾಡಿದ ಸಿಎಂ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: CM preached the National Unity Day Pledge…
ದಿವಂಗತ ಸರ್ದಾರ್ ವಲ್ಲಭಬಾಯ್ ಪಟೇಲ್ ರವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ರಾಷ್ಟ್ರೀಯ ಏಕತಾ ದಿವಸ”ದ ಅಂಗವಾಗಿ ಸಚಿವಾಲಯದ ಅಧಿಕಾರಿಗಳು ಹಾಗೂ ನೌಕರರುಗಳಿಗೆ ಪ್ರತಿಜ್ಞಾ ವಚನ ಬೋಧಿಸಿದರು.
ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಲು ನನ್ನನ್ನು ಅರ್ಪಿಸಿಕೊಳ್ಳುತ್ತೇನೆ ಮತ್ತು ನನ್ನ ದೇಶ ಬಾಂಧವರಲ್ಲಿ ಈ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ನಾನು ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಬಾಯ್ ಪಟೇಲ್ ರವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿಯನ್ನು ಕಾಪಾಡುತ್ತೇನೆ ಎಂದು ಪ್ರಮಾಣ ಮಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಒಮ್ಮನಸ್ಸಿನಿಂದ ಪ್ರತಿಜ್ಞೆ ಮಾಡುತ್ತಿದ್ದೇನೆ ಎಂದು ಪ್ರತಿಜ್ಞಾ ವಚನ ಬೋಧಿಸಿದರು.
ಇದೇ ಸಂದರ್ಭದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮನ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ. ಮಹದೇವಪ್ಪ, ಕೃಷಿ ಇಲಾಖೆ ಸಚಿವರಾದ ಎನ್. ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ನರೇಂದ್ರ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ, ಇತರೆ ಇಲಾಖೆಗಳ ಕಾರ್ಯದರ್ಶಿಗಳು, ಅಧಿಕಾರಿಗಳು ಹಾಗೂ ನೌಕರರುಗಳು ಉಪಸ್ಥಿತರಿದ್ದರು.