i
ರಾಜ್ಯ ರಸ್ತೆ ಸಾರಿಗೆ ಅಂತರ ನಿಗಮ ವರ್ಗಾವಣೆಗೆ ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: Extension of period for inter-corporation transfer of State Road Transport…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಕ್ಟೊಬರ್ 31ರ ವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.
ಆದರೆ, ನೌಕರರ ಹಿತದೃಷ್ಟಿಯಿಂದ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30ರ ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ. ನೌಕರರು ಈ ಸೌಲಭ್ಯದ ಸದುಪಯೋಗವನ್ನು ಪಡೆಯುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಜಾಗೃತ ವಿಭಾಗದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.