i
ಸರ್ಕಾರ ಪತನಗೊಳಿಸುವ ಬಿಜೆಪಿಯವರ ವ್ಯರ್ಥ ಪ್ರಯತ್ನ: ಸಿಎಂ…
ಚಂದ್ರವಳ್ಳಿ ನ್ಯೂಸ್, ಹೊಸಪೇಟೆ: BJP’s futile attempt to bring down the government: CM…
ಶಾಸಕ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತನವಾಗಲಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಹೊಸಪೇಟೆಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ಗೆಲ್ಲಿಸಿ ಬಹುಮತ ನೀಡಿದ್ದಾರೆ. ಐದು ವರ್ಷ ಕಾಂಗ್ರೆಸ್ ಸರ್ಕಾರವೇ ಆಡಳಿತ ಇರುತ್ತದೆ. ನಾನೇ ಐದುವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಒಮ್ಮೆ ಆಪರೇಷನ್ ಕಮಲ ಮಾಡಿ ಬಿಜೆಪಿಯವರು ಯಶಸ್ವಿಯಾಗಿದ್ದರಿಂದ, ಈಗ ಮತ್ತೆ ಆ ಪ್ರಯತ್ನಕ್ಕೆ ಕೈಹಾಕಬಹುದು ಎಂದುಕೊಂಡಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಲಿದೆ ಎಂದರು.
ಹೈಕಮಾಂಡ್ ನಿರ್ಧಾರ: ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿಗಳು ಇರಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಪ್ರಾದೇಶಿಕ ಪಕ್ಷ ಅಲ್ಲ. ಇಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ಹಂಪಿ ಉತ್ಸವ: ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಕಳೆದ ಸಾಲಿನಲ್ಲಿ ಜನವರಿ ಮಾಹೆಯಲ್ಲಿ ಹಂಪಿ ಉತ್ಸವ ಆಚರಿಸಲಾಗಿದ್ದಂತೆ , ಈ ಸಾಲಿನಲ್ಲಿಯೂ ಜನವರಿ ಮಾಹೆಯಲ್ಲಿ ಆಚರಿಸಲಾಗುವುದು ಎಂದರು.
ಸಕ್ಕರೆ ಕಾರ್ಖಾನೆ: ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಬಗ್ಗೆ ತಮ್ಮ ಅಭಿಪ್ರಾಯ ನೀಡುತ್ತಾ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನ: ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನದ ಕೊರತೆಯಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಯಿಸಿ, ಹಂಪಿ ವಿಶ್ವವಿದ್ಯಾಲಯವು ಅನುದಾನ ಕೋರಿದ ಮೇರೆಗೆ ಅನುದಾನವನ್ನು ಕೂಡಲೇ ಒದಗಿಸಲಾಗುವುದು ಎಂದರು.