i
ವೀರಶೈವ ಲಿಂಗಾಯತ, ಒಕ್ಕಲಿಗ, ಮರಾಠ ನಿಗಮದ ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: Extension of time to apply for various loan facilities of Veerashaiva Lingayat, Okkaliga, Maratha Corporation…
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2023-24 ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ನವೆಂಬರ್ 10 ರವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.