i
ಶೀಘ್ರ 2.90 ಲಕ್ಷ ಬಿಪಿಎಲ್ ಕಾರ್ಡ್ ವಿತರಣೆ-ಸಚಿವ ಮುನಿಯಪ್ಪ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ 2.90 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಆದಷ್ಟು ಶೀಘ್ರ ಈ ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಕುಟುಂಬಗಳಿಗೆ ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ತಿಳಿಸಿದ್ದಾರೆ.