i
ನ.14ರಂದು ಮುಜರಾಯಿ ದೇವಾಲಯಗಳಲ್ಲಿ ಗೋಪೂಜೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಎ, ಬಿ ಮತ್ತು ಸಿ ಪ್ರವರ್ಗದ ಮುಜರಾಯಿ ಅಧಿಸೂಚಿತ ದೇವಾಲಯಗಳಲ್ಲಿ 2023 ನವೆಂಬರ್ 14 ದೀಪಾವಳಿ ಬಲಿಪಾಡ್ಯಮಿ ದಿನದಂದು ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರ ಸೂಚನೆಯಂತೆ ನ. 14 ರಂದು ಗೋಪೂಜೆ ಕಾರ್ಯಕ್ರಮ ಏರ್ಪಡಿಸಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗನ್ನು ವಿಶೇಷವಾಗಿ ಆಹ್ವಾನಿಸಿ, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವಂತೆ ಸಂಬಂಧಪಟ್ಟ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ, ಸ್ಥಳೀಯ ಆಡಳಿತಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹಿರಿಯೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.