i
ನವೆಂಬರ್ 14 ರಂದು ಬನ್ನೇರುಘಟ್ಟ ಜೈವಿಕ ಉದ್ಯಾನ ಸಾರ್ವಜನಿಕರ ವೀಕ್ಷಣೆಗೆ ಮುಕ್ತ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರತಿ ಮಂಗಳವಾರ, ವಾಡಿಕೆಯಂತೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ವಾರದ ರಜೆ ಕೊಡಲಾಗುತ್ತಿರುತ್ತದೆ. ಆದರೆ ನವೆಂಬರ್ 14ರ ಮಂಗಳವಾರ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಉದ್ಯಾನವನದ ವೀಕ್ಷಣೆಗೆ ಆಗಮಿಸುವ ನಿರೀಕ್ಷೆ ಇರುವುದರಿಂದ, ಪ್ರವಾಸಿಗರ ವೀಕ್ಷಣೆಗೆ ಅನುಕೂಲವಾಗುವಂತೆ ಸದರಿ ದಿನದಂದು ಉದ್ಯಾನವನದ ಮೃಗಾಲಯ, ಸಫಾರಿ ಮತ್ತು ಚಿಟ್ಟೆ ಉದ್ಯಾನವನ ಇವುಗಳನ್ನು ತೆರೆದಿಡಲಾಗುತ್ತದೆ. ಸಾರ್ವಜನಿಕರು ಈ ಬದಲಾವಣೆ ಹಾಗೂ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬಹುದಾಗಿದೆ.
ಆದರೆ ನವೆಂಬರ್ 15 ರ ಬುಧವಾರದಂದು ಸಿಬ್ಬಂದಿಗಳು ಮಂಗಳವಾರದ ವಾರದ ರಜೆಯನ್ನು ಉಪಯೋಗಿಸಿಕೊಳ್ಳಲು ಅನುಕೂಲವಾಗುವಂತೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರಜೆ ಘೋಷಿಸಲಾಗಿದ್ದು, ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿರುವುದಿಲ್ಲ ಎಂದು ಬನ್ನೇರುಘಟ್ಟ ಜೈವಿಕ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.