![](https://www.chandravallinews.com/wp-content/uploads/2023/11/WhatsApp-Image-2023-11-10-at-9.20.01-PM.jpeg)
i
905 ಕೆ.ಜಿ. ಗಾಂಜಾ ನಾಶ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೀದರ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾವನ್ನು ಬೆಳೆಯುತ್ತಿದ್ದ / ಸಾಗಾಣಿಕೆ / ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಜಿಲ್ಲೆಯ ವಿವಿಧ ಪೆÇಲೀಸ್ ಠಾಣೆಗಳಲ್ಲಿ 17 ಪ್ರಕರಣಗಳನ್ನು ದಾಖಲಿಸಿದ್ದು, ಸದರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾವನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮಿಟಿ ವತಿಯಿಂದ ಪಡೆದುಕೊಂಡು ನಿಯಮಾನುಸಾರ ನಾಶಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಬೀದರ ಜಿಲ್ಲೆಯ ಧನ್ನೂರ ಗ್ರಾಮದಲ್ಲಿರುವ ಇನ್ವೆರೋ ಬಯೋಟಿಕ್ ಜೈವಿಕ ತ್ಯಾಜ್ಯ ವಿಲೇವಾರಿ ಘಟಕದ ಕುಲುಮೆಯಲ್ಲಿ ನವೆಂಬರ್ 9 ರಂದು 905 ಕೆಜಿ 182 ಗ್ರಾಂ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಬೀದರ್ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.