i
ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರಶಸ್ತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಸಾಧಾರಣ ಸಾಧನೆ ಮಾಡಿರುವಂತಹ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ ಮಾಡಲು ಶುಕ್ರವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಆಯ್ಕೆ ಸಮಿತಿ ಸಭೆ ನಡೆಯಿತು.
2023ನೇ ಸಾಲಿಗೆ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ ಹಾಗೂ ಕಲೆ, ಸಾಂಸ್ಕೃತಿಕ, ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವಂತಹ ಮಕ್ಕಳ ಸಾಧನೆ ಗುರುತಿಸಿ, 5 ರಿಂದ 18 ವರ್ಷ ಒಳಗಿನ ವಯೋಮಿತಿಯ ಮಕ್ಕಳನ್ನು ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ 8 ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಪಿವಿಎಸ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಡಾ.ಪಿ.ವಿ.ಶ್ರೀಧರಮೂರ್ತಿ, ದರ್ಶನ್ ಸಂಸ್ಥೆಯ ಲಲಿತಾ ಕೃಷ್ಣಮೂರ್ತಿ ಇದ್ದರು.