i
ವಿದ್ಯುತ್ ವೈರ್ ಸ್ಪರ್ಶಿಸಿ ವ್ಯಕ್ತಿ ಸಾವು…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ತಾಲ್ಲೂಕಿನ ಗೋಪನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡವಿ ಚಿಕ್ಕೇನಹಳ್ಳಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಪ್ರಕಾಶ್(4೦) ಎಂಬ ವ್ಯಕ್ತಿ ವಿದ್ಯುತ್ ಪರಿವರ್ತಕದ ಹತ್ತಿರ ಓಡಾಡುವ ಸಂದರ್ಭದಲ್ಲಿ ಶಾಕ್ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಚಳ್ಳಕೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.