i
ನೂತನ ಅಧ್ಯಕ್ಷ ವಿಜಯೇಂದ್ರ, ಯಡಿಯೂರಪ್ಪ ಇವರನ್ನು ಭೇಟಿ ಮಾಡಿ ಮಾಲಾರ್ಪಣೆ ಮಾಡಿದ ಎಸ್ ಕೆಬಿ-ಸೌಭಾಗ್ಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಸ್. ಕೆ. ಬಸವರಾಜನ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ರವರು, ಭಾರತೀಯ ಜನತಾ ಪಕ್ಷದ ನೂತನ ರಾಜ್ಯಧ್ಯಕ್ಷರಾಗಿ ನೇಮಕಗೊಂಡಿರುವ ಯುವ ನಾಯಕ ಬಿ.ವೈ.ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಪುಷ್ಪಮಾಲೆ ಅರ್ಪಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಗಳೂರಿನ ದವಳಗಿರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಶಾಲು ಹೊದಿಸಿ ಮಾಲಾರ್ಪಣೆ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದರು.
ಚಿತ್ರದುರ್ಗದಿಂದ ಬಸವರಾಜನ್ ಹಾಗೂ ಸೌಭಾಗ್ಯ ಬಸವರಾಜನ್ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು.