i
ಕಾಂಗ್ರೆಸ್ ಪಕ್ಷದ ಸ್ಥಳೀಯ ಸ್ಪರ್ಧಾಕಾಂಕ್ಷಿ ಡಾ.ಬಿ.ತಿಪ್ಪೇಸ್ವಾಮಿ ಪರ ಬಿರುಸಿನ ಪ್ರಚಾರ ಮಾಡಿದ ಓ.ಶಂಕರ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸ್ಥಳೀಯ ಸ್ಪರ್ಧಾಕಾಂಕ್ಷಿ ಡಾ.ಬಿ.ತಿಪ್ಪೇಸ್ವಾಮಿ ಪರವಾಗಿ ಲಿಡ್ಕರ್ ಸಂಸ್ಥೆಯ ಮಾಜಿ ಅಧ್ಯಕ್ಷ ಓ.ಶಂಕರ್ ಅವರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಾನಂಗಿ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಭೇಟಿ ಮಾಡಿ ಈ ಭಾರಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯ ಸ್ಪರ್ಧಾಕಾಂಕ್ಷಿ ಡಾ.ಬಿ.ತಿಪ್ಪೇಸ್ವಾಮಿ(ಜೆಜೆ ಹಟ್ಟಿ)ರವರಿಗೆ ಬೆಂಬಲ ನೀಡಬೇಕು. ಸ್ಥಳೀಯ ಅಭ್ಯರ್ಥಿಯನ್ನು ನಾವು ಆಯ್ಕೆ ಮಾಡಿಕೊಂಡು ಗೆಲ್ಲಿಸಿಕೊಳ್ಳುವ ಮೂಲಕ ರಾಹುಲ್ ಗಾಂಧಿ, ಸಿಎಂ, ಡಿಸಿಎಂ ಇವರುಗಳ ಕೈ ಬಲ ಪಡಿಸಬೇಕು ಎಂದು ಲಿಡ್ಕರ್ ಸಂಸ್ಥೆಯ ಮಾಜಿ ಅಧ್ಯಕ್ಷ ಓ.ಶಂಕರ್ ಪ್ರಚಾರ ಮಾಡಿದರು.