i
ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ಚನ್ನಗಿರಿ:
ಪಟ್ಟಣದ ಸರಕಾರಿ ಪದವಿ ಕಾಲೇಜಿನ ಓ ಸಹನಾ ಸ್ಥಳೀಯ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಖೋಖೋ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಕಾಲೇಜಿನಿಂದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ 12 ಜನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಓ ಸಹನಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ನಮ್ಮ ಕಾಲೇಜಿನಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿರುವುದು ಹೆಮ್ಮೆಯ ಸಂಗತಿ ಆಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.