![](https://www.chandravallinews.com/wp-content/uploads/2023/11/karnataka-lokayukta-1024x569.jpg)
i
ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ ನವೆಂಬರ್ 20 ಮತ್ತು 21 ರಂದು ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರಿಂದ ದೂರು ಹಾಗೂ ಅವಹಾಲುಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆಯಿಟ್ಟಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ, ಕರ್ತವ್ಯದಲ್ಲಿ ನಿರ್ಲಕ್ಷತನ, ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ನಿಗಧಿತ ನಮೂನೆಯಲ್ಲಿ ಸಲ್ಲಿಸಬಹುದಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ: ನ.20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ ಹಾಗೂ ಅಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-2 ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ನ.20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಮೊಳಕಾಲ್ಮೂರು ತಾಲ್ಲೂಕು ಕಚೇರಿಯಲ್ಲಿ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ನಿರೀಕ್ಷಕರು-3 ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ನ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ಹಾಗೂ ಅಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಪೊಲೀಸ್ ಉಪಾಧೀಕ್ಷಕರು ಹಾಜರಿದ್ದು, ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕರಿಸುವರು ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.