i
ನ.23ರಂದು ವಿಶೇಷಚೇತನರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಇದೇ ನವೆಂಬರ್ 23ರಂದು ಬೆಳಿಗ್ಗೆ 10 ಗಂಟೆಗೆ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶೇಷಚೇತನರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆಗಳ ವಿವರ: 18 ರಿಂದ 45 ವರ್ಷ ವಯೋಮಿತಿಯ ಅಂಧರಿಗೆ ಮಡಿಕೆ ಹೊಡೆಯುವುದು, ಕೇನ್ ರೇಸ್ ಸ್ಪರ್ಧೆ ನಡೆಯಲಿದೆ. ಶ್ರವಣ ದೋಷವುಳ್ಳವರಿಗೆ 100ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಸ್ಪರ್ಧೆ ನಡೆಯಲಿದೆ. ದೈಹಿಕ ವಿಕಲಚೇತನರಿಗೆ 100 ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ. ಬುದ್ಧಿಮಾಂದ್ಯರಿಗೆ 100ಮೀ ಓಟ, ಬಕೆಟ್ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಸಾಂಸ್ಕೃತಿಕ ಸ್ಪರ್ಧೆಗಳ ವಿವರ: 18 ರಿಂದ 45 ವರ್ಷ ವಯೋಮಿತಿಯ ದೃಷ್ಟಿದೋಷ ಮತ್ತು ದೈಹಿಕ ವಿಕಲಚೇತನರು ಮತ್ತು ಬುದ್ದಿಮಾಂದ್ಯವಿರುವವರಿಗೆ ಜಾನಪದ ಗೀತೆ, ಭಾವಗೀತೆ ಭಕ್ತಿಗೀತೆಯನ್ನು ಏರ್ಪಡಿಸಲಾಗಿದೆ. ಆಸಕ್ತ ವಿಶೇಷಚೇತನರು ಜಿಲ್ಲಾಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.