
ನಿರುದ್ಯೋಗಿ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ 2023-24ನೇ ಸಾಲಿನಲ್ಲಿ ಮಹಿಳಾ ತರಬೇತಿ ಯೋಜನೆಯಡಿಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ ವಿವಿಧ ರೀತಿಯ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ kaushalkar.com ವೆಬ್ ಸೈಟ್ನಲ್ಲಿ ನೋಂದಾಣಿಯಾಗಿರುವ ಮತ್ತು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನ.24 ಅರ್ಜಿ ಸಲ್ಲಿಸಲು ಕೊನೆ ದಿನ. ಸಂಸ್ಥೆಯು ತರಬೇತಿ ನೀಡಲು ಮೂಲಭೂತ ಸೌಕರ್ಯ, ಯಂತ್ರೋಪಕರಣ ಹಾಗೂ ಸ್ಥಳಾವಕಾಶ ಹೊಂದಿರಬೇಕು. ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಅಗತ್ಯ ದಾಖಲೆಗಳು ಹಾಗೂ ಈ ಹಿಂದೆ ತರಬೇತಿ ನೀಡಿದ ಛಾಯ ಚಿತ್ರಗಳ ಸಹಿತವಾಗಿ ಅರ್ಜಿ ಪ್ರಸ್ತಾವನೆಯನ್ನು ಜಿಲ್ಲಾ ಬಾಲಭವನ ಸ್ಟೇಡಿಯಂ ಹತ್ತಿರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.