i
ನ.26ರಂದು ಭಾರತ ಸಂವಿಧಾನ ದಿನಾಚರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ ನವೆಂಬರ್ 26ರಂದು ಭಾರತ ಸಂವಿಧಾನ ದಿನಾಚರಣೆಯನ್ನು ಆಚರಿಸುತ್ತಿದ್ದು, ಅಂದು ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ, ನಿಗಮ ಮಂಡಳಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯ ಭಾವಚಿತ್ರಗಳನ್ನು ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಪ್ರದರ್ಶಿಸಬೇಕು.
ಸಂವಿಧಾನ ಪೀಠಿಕೆಯ ಓದುವ ಮತ್ತು ಪ್ರತಿಜ್ಞೆ ಮಾಡುವ ಮೂಲಕ ಆಚರಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಕೋರಿದ್ದಾರೆ.