i
ಡಿ.01 ರಂದು ಏಡ್ಸ್ ದಿನ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ಜ್ಞಾನಗಂಗೋತ್ರಿ, ಸ್ನಾತಕೋತ್ತರ ಕೇಂದ್ರ ದಾವಣಗೆರೆ ವಿಶ್ವವಿದ್ಯಾಲಯ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಡಿ.01 ರಂದು ಬೆಳಿಗ್ಗೆ 10:30ಕ್ಕೆ ನಗರದ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ದಿವ್ಯಪ್ರಭು ಕಾರ್ಯಕ್ರಮ ಉದ್ಘಾಟಿಸುವರು. ಜಿ.ಪಂ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಎಸ್.ಜೆ ಸೋಮಶೇಖರ್ ಏಡ್ಸ್ ನಿಯಂತ್ರಣದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದವರಿಗೆ ಸನ್ಮಾನ ನೆರವೇರಿಸಲಿದ್ದಾರೆ. ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಬಿ.ಡಿ ಕುಂಬಾರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಪಿ. ರೇಣುಪ್ರಸಾದ್. ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ಸಿ.ಜೆ ಸುಧಾ ಪ್ರಸ್ತಾವಿಕವಾಗಿ ಮಾತನಾಡುವರು.
ದಾವಣಗೆರೆ ವಿಶ್ವವಿದ್ಯಾನಿಲಯ ಕುಲ ಸಚಿವ (ಆಡಳಿತ) ಬಿ.ಬಿ ಸರೋಜ, ದಾವಣಗೆರೆ ವಿಶ್ವವಿದ್ಯಾನಿಲಯ ಕುಲ ಸಚಿವ(ಮೌಲ್ಯಮಾಪನ) ಡಾ.ಸಿ.ಕೆ. ರಮೇಶ, ದಾವಣಗೆರೆ ವಿಶ್ವವಿದ್ಯಾನಿಲಯ ಹಣಕಾಸು ಅಧಿಕಾರಿ ಡಾ.ಆರ್. ಶಶಿಧರ್, ಜ್ಞಾನಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಎಂ.ವಿ ಲೋಕೇಶ್, ಚಿತ್ರದುರ್ಗ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಡೀನ್ ಡಾ. ಬಿ.ವೈ ಯುವರಾಜ್, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಎಸ್.ಪಿ ರವೀಂದ್ರ, ರಾಷ್ಟೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಡಾ.ಡಿ. ಶಶಿಧರ, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿ.ವಿ ಗಿರೀಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಡಿ.ಗೀತಾಂಜಲಿ, ಎಆರ್ಟಿ ಕೇಂದ್ರದ ವೈದ್ಯಾಧಿಕಾರಿ ಡಾ.ರೂಪಶ್ರೀ ಉಪಸ್ಥಿತಿರುವರು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದೆ.