i
ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ದಿಗೆ ನೆರೆವು ನೀಡಿ, ಕಳೆದ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ ಕ್ರೀಡಾ ಪೋಷಕರು ಅರ್ಜಿ ಸಲ್ಲಿಸಬಹುದು. ಡಿ.06 ರೊಳಗಾಗಿ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಕಚೇರಿಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.