i
ಸಾಧನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದಂತಹ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರರಿಗೆ, ಜೀವನ ಪರ್ಯಂತ ಸಾಧನಾ ಪ್ರಶಸ್ತಿ ಹಾಗೂ ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಅಧಿಕೃತ ವೆಬ್ ಸೈಟ್ http://sevasindhuservicse.karnataka.gov.in ಮೂಲಕ ಆನ್ಲೈನ್ನಲ್ಲಿ ಡಿಸೆಂಬರ್ 08 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.