![](https://www.chandravallinews.com/wp-content/uploads/2023/12/WhatsApp-Image-2023-12-02-at-6.04.23-PM-1-1024x1283.jpeg)
i
ಕಳ್ಳಿಹಟ್ಟಿ ಗ್ರಾಮದ ಮಂಜಪ್ಪ ಕಣ್ಮರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಕಳ್ಳಿಹಟ್ಟಿ ಗ್ರಾಮದ ನಿವಾಸಿ ಸಿ. ಮಂಜಪ್ಪ ಎಂಬ ವ್ಯಕ್ತಿ ಕಾಣೆಯಾಗಿರುವ ಪ್ರಕರಣ ಚಿತ್ರದುರ್ಗ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯ ಚಹರೆ ಇಂತಿದೆ. ಸಿ. ಮಂಜಪ್ಪ (55 ವರ್ಷ) ತಂದೆ ಚೌಡಪ್ಪ, 5.6 ಅಡಿ ಎತ್ತರ, ಕೆಂಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಕೂದಲು ಇರುತ್ತದೆ. ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಕಾಣೆಯಾದ ಸಮಯದಲ್ಲಿ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಈ ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಕುರಿತು ಮಾಹಿತಿ ತಿಳಿದು ಬಂದಲ್ಲಿ ಚಿತ್ರದುರ್ಗ ಗ್ರಾಮಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.