![](https://www.chandravallinews.com/wp-content/uploads/2023/12/WhatsApp-Image-2023-12-02-at-6.08.11-PM-1024x489.jpeg)
i
ಸತತ 3ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿಕ್ಷಕಿ ಟಿ.ಬಿ.ಅನಿತಾ…
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ೨೦೨೩-೨೪ ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾಕಾರ್ಯಕ್ರಮವನ್ನು ಕ.ರಾ.ಶಿ.ಕ.ನಿಧಿ ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿತ್ತು.
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ತಾಲೂಕಿನ ತುಪ್ಪದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಟಿ.ಬಿ.ಅನಿತಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸತತ 3ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ವಿಶೇಷ. ಆಯ್ಕೆಯಾದ ಶಿಕ್ಷಕಿಗೆ ಜಿಲ್ಲಾ ನೋಡಲ್ ಅಧಿಕಾರಿ ಎಚ್.ಗೋವಿಂದಪ್ಪ ಪ್ರಶಸ್ತಿ ಪತ್ರ, ನಗದು ಬಹುಮಾನ ವಿತರಿಸಿದರು. ಡಯಟ್ ಉಪನ್ಯಾಸಕ ಎಸ್.ಬಸವರಾಜು, ತೀರ್ಪುಗಾರರಾದ ಗೋವಿಂದರಾಜು ಹರೀಶ್ ಇದ್ದರು.