![](https://www.chandravallinews.com/wp-content/uploads/2023/12/ambedkar-.jpg)
i
ಡಿ.6ರಂದು ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಹಣಾ ದಿನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪುಣ್ಯಸ್ಮರಣೆ ಡಿಸೆಂಬರ್ 6ರಂದು ಡಾ.ಬಿ.ಆರ್.ಅಂಬೇಡ್ಕರ್ರವರ ಪರಿನಿರ್ವಹಣಾ ದಿನವನ್ನಾಗಿ ಆಚರಿಸಲಿರುವುದರಿಂದ, ಚಿತ್ರದುರ್ಗ ನಗರಸಭೆ ಹತ್ತಿರವಿರುವ ಡಾ.ಬಿ.ಆರ್.ಅಂಬೇಡ್ಕರ್ರವರ ಪ್ರತಿಮೆಗೆ ಡಿ.6ರಂದು ಬೆಳಿಗ್ಗೆ 9ಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ದಲಿತ ಸಂಘ ಸಂಸ್ಥೆಗಳ ಮುಖಂಡರು, ಸದಸ್ಯರು, ಡಾ.ಬಿ.ಆರ್.ಅಂಬೇಡ್ಕರ್ರವರ ಅನುಯಾಯಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.