![](https://www.chandravallinews.com/wp-content/uploads/2023/12/WhatsApp-Image-2023-12-08-at-9.17.42-PM.jpeg)
i
ಗಣರಾಜ್ಯೋತ್ಸವ ಪೆರೇಡ್ ಗೆ ದೊಡ್ಡಬಳ್ಳಾಪುರ ಯುವ ಪ್ರತಿಭೆ ಜಿತೇಶ್ ಆಯ್ಕೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೆಹಲಿಯಲ್ಲಿ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗಿರುವ ಜಿತೇಶ್ ಅವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದನೆ ತಿಳಿಸಿದೆ.
ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ ದಂಪತಿಗಳ ಮಗ ಜಿ.ಹಿತೇಶ್ ಅವರು ದೆಹಲಿಯಲ್ಲಿ 2024 ನೇ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಶ್ರೀಕೊಂಗಾಡಿಯಪ್ಪ ಕಾಲೇಜು ಎನ್.ಸಿ.ಸಿ ಘಟಕದಿಂದ ಆಯ್ಕೆಯಾಗಿದ್ದಾರೆ.
ತಬಲ ವಾದಕನಾಗಿ ಜಿತೇಶ್ ನೂರಾರು ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶನ ಮಾಡುವ ಮೂಲಕ ಯುವ ಕಲಾವಿದನಾಗಿ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ.
ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲೂ ಹಾಗೂ ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಮಾಡಿರುವ ಜಿತೇಶ್, ಪ್ರಸ್ತುತ. ಬಿ.ಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.
ಯುವಕಲಾವಿದನಾಗಿ ರಾಷ್ಟ್ರಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಜಿ.ಹಿತೇಶ್ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘದ ಕಾರ್ಯದರ್ಶಿ ಬಿ.ಚಂದ್ರಶೇಖರ್ ಅಭಿನಂದಿಸಿದ್ದಾರೆ.