i
ಬೆಳೆ ವಿಮೆ ಹಾಗೂ ಬೆಳೆ ಪರಿಹಾರದ ಅವ್ಯವಹಾರ ಸಿಒಡಿ ತನಿಖೆಗೆ ವಹಿಸಿ-ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಳೆ ವಿಮೆ ಹಾಗೂ ಬೆಳೆ ಪರಿಹಾರದಲ್ಲಿ ಆಗಿರುವ ಅವ್ಯವಹಾರವನ್ನು ಸಿಒಡಿ ತನಿಖೆಗೆ ವಹಿಸಬೇಕು ಎಂದು ವಿಧಾನಸಭಾ ಅಧಿವೇಶನದಲ್ಲಿ ಆಗ್ರಹಿಸಿದೆ.ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ಚಳ್ಳಕೆರೆ ತಾಲೂಕಿನ ಪಿ.ಮಹಾದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಾಯಿತ ಖಾತೆದಾರರಿಗೆ ಬೆಳೆ ವಿಮೆ ಪರಿಹಾರ ನೀಡುವಲ್ಲಿ ಅವ್ಯವಹಾರವಾಗಿರುವುದನ್ನು ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರ ಗಮನಕ್ಕೆ ತಂದೆರು. ತಾಲೂಕಿನ ಬೀಳು ಭೂಮಿ ಹಾಗೂ ನೋಂದಾಯಿತ ಬೆಳೆಯಲ್ಲದ ಬೇರೆ ಬೆಳೆಗಳಿಗೆ 80 ಪ್ರಕರಣಗಳಲ್ಲಿ 83 ಲಕ್ಷ ರೂ. ಗೂ ಹೆಚ್ಚು ಬೆಳೆ ವಿಮೆ ದುರುಪಯೋಗವಾಗಿದೆ. ಮೂಲ ಖಾತೆದಾರರ ಬದಲಿಗೆ ಬೇರೆಯೊಬ್ಬರನ್ನು ನೋಂದಣಿ ಮಾಡಿಸಿದ 2 ಪ್ರಕರಣಗಳಲ್ಲಿ 1.90 ಲಕ್ಷ ರೂ. ಬೆಳೆ ವಿಮೆ ಹಣ ಪಡೆದು ವಂಚಿಸಲಾಗಿದೆ. ಈ ಬಗ್ಗೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಚಳ್ಳಕೆರೆ ತಾಲೂಕಿನ 20 ಪಂಚಾಯಿತಿ ವ್ಯಾಪ್ತಿಯನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ರಘುಮೂರ್ತಿ ಒತ್ತಾಯಿಸಿದರು.